ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 10,070 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,11,837ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 130 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,994ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,853 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,37,516ಕ್ಕೆ ಏರಿಕೆಯಾಗಿದೆ.
ಇಂದು 7,144 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,92,412ಕ್ಕೆ ಏರಿಕೆಯಾಗಿದೆ. 1,10,412 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್19 ಸೋಂಕು ಹರಡದಂತೆ ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರವು ಮಾರ್ಗಸೂಚಿಯನ್ನು ಹೊರತಂದಿದ್ದು, ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸ ಮಾಡುವ ಸ್ಥಳ & ಪ್ರಯಾಣಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ, ನಿಯಮ ಉಲ್ಲಂಘಿಸಿದವರಿಗೆ ರೂ 1,000 ದಂಡ ವಿಧಿಸಲಾಗುವುದು.
