ಡಿ.ಕೆ.ರವಿ ಪತ್ನಿ ಕುಸುಮಾ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ಕುಸುಮಾ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದೆಹಲಿಗೆ ಇಂದು ಅಭ್ಯರ್ಥಿ ಪಟ್ಟಿಯನ್ನು ಶಿಫಾರಸ್ಸು ಮಾಡುವುದಾಗಿ ತಿಳಿಸಿದರು. ಅಭ್ಯರ್ಥಿ ಪಟ್ಟಿಯನ್ನು ಇಂದು ದೆಹಲಿಗೆ ಶಿಫಾರಸ್ಸು ಮಾಡುತ್ತೇವೆ. ನಾವ್ಯಾರೂ ಟಿಕೆಟ್ ಕೊಡಲ್ಲ. ನಮ್ಮ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತೆ. ಆಗ ಸಿರಾ, ರಾಜರಾಜೇಶ್ವರಿ ನಗರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಅಂತಿಮ ಆಗುತ್ತದೆ ಎಂದು ಹೇಳಿದರು. ಮುಂದುವರೆದ ಅವರು, ಇಂದು ಕೆಪಿಸಿಸಿ ಕಚೇರಿಯಲ್ಲಿ ನೂರು ಜನ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ. ಇವರ ಹಿಂದೆ ಸಾವಿರಾರು ಜನ ಪಕ್ಷ ಸೇರ್ಪಡೆ ಆಗುತ್ತಾರೆ. ಇವರ ಸೇರ್ಪಡೆ ಪಕ್ಷದ ಶಕ್ತಿಯನ್ನು ಮತ್ತಷ್ಟು ಜಾಸ್ತಿ ಮಾಡಿದೆ ಎಂದರು.
ಕಾಂಗ್ರೆಸ್ಗೆ ಸೇರಿಸಿಕೊಂಡು ಅವರನ್ನೇ ಆರ್.ಆರ್.ನಗರ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ….
