ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ.
ಇಂಧನ ಕೊರತೆ

ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು.
ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ.
ರಾಜ್ಯದಲ್ಲಿ ವಿದ್ಯುತ್ ಅಭಾವ ಇದೆ ಎಂದು ಬಿಂಬಿಸಿದರೆ ಬಂಡವಾಳ ಹೂಡಿಕೆದಾರರು ಹಿಂಜರಿಯುತ್ತಾರೆ. ಈ ಸರ್ಕಾರ ಸತ್ತವರಿಗೇ ಪರಿಹಾರ ನೀಡಿಲ್ಲ. ಇನ್ನು ಮಳೆ ಸಂತ್ರಸ್ತರಿಗೆ ಕೊಡುತ್ತಾರೆಯೇ? ಈ ಸರಕಾರಕ್ಕೆ ಬಡವರಿಗೆ ನೆರವಾಗುವ ಅನುಭವವಾಗಲಿ, ಮನಸ್ಥಿತಿಯಾಗಲಿ ಇಲ್ಲ. ರೈತರ ಬಗ್ಗೆ ಕಾಳಜಿಯಂತೂ ಮೊದಲೇ ಇಲ್ಲ.
ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ:

ಸಿದ್ದರಾಮಯ್ಯ ಅವರು ರಾಷ್ಟ್ರ ಮಟ್ಟದ ರಾಜಕಾರಣಕ್ಕೆ ಹೋಗುವ ವಿಚಾರವಾಗಿ ನಮ್ಮ ಬಳಿ ಯಾವುದೇ ಚರ್ಚೆ ಆಗಿಲ್ಲ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಕೇವಲ ಊಹಾಪೋಹ ಮಾತ್ರ. ಈ ವಿಚಾರವಾಗಿ ಪಕ್ಷ ಉಂಟು, ನಮ್ಮ ಶಾಸಕಾಂಗ ಪಕ್ಷದ ನಾಯಕರು ಉಂಟು. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ.
ರಾಹುಲ್ ಗಾಂಧಿ ಅವರೇ ಜವಾಬ್ದಾರಿ ವಹಿಸಿಕೊಳ್ಳಬೇಕು:

ಇಡೀ ದೇಶದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರೇ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಅವರೇ ಕೆಲಸ ಮಾಡುತ್ತಿದ್ದು, ಅವರ ಮುಂದಾಳತ್ವ ಬೇಕು ಎಂಬುದು ಇಡೀ ಕಾಂಗ್ರೆಸ್ ಕಾರ್ಯಕರ್ತರ ಅಪೇಕ್ಷೆ. ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ವಿಚಾರವಾಗಿ ಕೆಲವೊಂದು ಪ್ರಕ್ರಿಯೆಗಳಿವೆ. ಆ ಮೂಲಕ ಆಯ್ಕೆ ನಡೆಯುತ್ತದೆ.
ಉಪಚುನಾವಣೆ:
ಉಪಚುನಾವಣೆಯಲ್ಲಿ ಬಿಜೆಪಿ ಅವರು ತಮ್ಮ ಬಂಡಾಯ ಅಭ್ಯರ್ಥಿಯನ್ನು ಸ್ಪರ್ಧೆಯಿಂದ ಹಿಂದೆ ಸರಿಸಿರುವುದು ಅವರ ತಂತ್ರಗಾರಿಕೆ. ಅವರ ರಾಜಕೀಯ ತಂತ್ರಗಾರಿಕೆ ಅವರು ಮಾಡಿಕೊಳ್ಳಲಿ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಲಿ. ಯಾರ ಮನಸ್ಸಾದರೂ ಓಲೈಸಲಿ. ಅದಕ್ಕೂ ನಮಗೂ ಸಂಬಂಧವಿಲ್ಲ. ಅವರ ಪಕ್ಷ ರಾಜಕಾರಣದ ಗೊಡವೆ ನಮಗೆ ಬೇಡ.
ಸಮ್ಮಿಶ್ರ ಸರ್ಕಾರ ಮುಗಿದ ಅಧ್ಯಾಯ:
ಸಮ್ಮಿಶ್ರ ಸರ್ಕಾರ ಕೆಡವಿದ್ದು ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ಸರಕಾರ ಕೆಡವಿದ್ದು ಯಾರು ಎಂಬುದರ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೇ ಹೋಗಿ ಕೇಳಿ. ಸಮ್ಮಿಶ್ರ ಸರ್ಕಾರ ಪತನ ಮುಗಿದ ಅಧ್ಯಾಯ. ಆ ಬಗ್ಗೆ ಚರ್ಚೆ ಮಾಡಲು ನನಗೆ ಯಾವುದೇ ಆಸಕ್ತಿ ಇಲ್ಲ.
ರಾಜ್ಯದ ಜನರ ಸೇವೆ, ಪಕ್ಷವನ್ನು ಅಧಿಕಾರಕ್ಕೆ ತರುವುದು, ಜನ ನಮಗೆ ಆಶೀರ್ವಾದ ಮಾಡಬೇಕು ಎಂಬುದರ ಮೇಲಷ್ಟೇ ನಾವು ಆಸಕ್ತಿ ವಹಿಸಿದ್ದೇವೆ.
ಡಿಸೈನ್ ಬಾಕ್ಸ್ ಅವರು ಸಹಾಯ ಮಾಡುತ್ತಿದ್ದರು:
ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಿರುವ ಏಜೆನ್ಸಿ ಡಿಸೈನ್ ಬಾಕ್ಸ್ ಮೇಲೆ ಐಟಿ ದಾಳಿ ನಡೆದಿದೆಯಲ್ಲಾ ಎಂಬ ಮಾಧ್ಯಮದವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಯಾರು ಹೇಳಿದ್ದು ಅವರು ನನ್ನ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿದ್ದಾರೆ ಎಂದು ಮರುಪ್ರಶ್ನಿಸಿದರು.
ಅವರು ನನಗೆ ಸಹಾಯ ಮಾಡುತ್ತಿದ್ದರು. ಅಲ್ಲಿರುವವರು ವೃತ್ತಿಪರರು. ಅವರು ಐಟಿ ಅಧಿಕಾರಿಗಳಿಗೆ ಯಾವ ಉತ್ತರ ಕೊಡಬೇಕೋ ಕೊಡುತ್ತಾರೆ. ಅವರು ನಿನ್ನೆ ನನ್ನ ಜತೆ ಮಾತನಾಡಲು ಪ್ರಯತ್ನಿಸಿದರು. ಆದರೆ ನನಗೆ ಸಮಯ ಇರದ ಕಾರಣ ಅದು ಸಾಧ್ಯವಾಗಲಿಲ್ಲ.
ಐಟಿ ದಾಳಿ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಮಾತನಾಡುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
