ಜೋಗ್ ಕಾರ್ಗಲ್: ಜೋಗ್ ಕಾರ್ಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.
ಜೋಗ್ ಕಾರ್ಗಲ್ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ವಾಸಂತಿ ರಮೇಶ್ಹಾ ಹಾಗೂ ಪಿ. ಮಂಜುನಾಥ್ ರವರು ಜಯಗಳಿಸಿದರು. ಅಧ್ಯಕ್ಷರಾಗಿ ವಾಸಂತಿ ರಮೇಶ್ಹಾ ಹಾಗೂ ಉಪಾಧ್ಯಕ್ಷರಾಗಿ ಪಿ. ಮಂಜುನಾಥ್, ಜನಮೆಚ್ಚುವ ಆಡಳಿತ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಾಗರ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರು ಸದಸ್ಯರುಗಳು ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.

ವರದಿ: ಹರ್ಷ ಸಾಗರ
