ಸಿಬಿಐ ದಾಳಿ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನಗರದ ಸಿಬಿಐ ಘಟಕದಲ್ಲಿ ಎಫ್‍ಐಆರ್ ದಾಖಲಾಗಿದೆ.
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಕೇಸಿನಡಿ ಡಿ ಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದ್ದು ಕಾಂಗ್ರೆಸ್‍ನ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಕಾಂಗ್ರೆಸ್ ನಾಯಕನಿಗೆ ಇದು ಇನ್ನಷ್ಟು ಕಂಟಕವಾಗುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರದ ಅನುಮತಿ ಪಡೆದ ನಂತರ ಸಿಬಿಐ ಅಕಾರಿಗಳು ಇಂದು ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡಿದ್ದು, ಈ ವೇಳೆ ಡಿಕೆಶಿಯ ನಿವಾಸದಲ್ಲಿ 50 ಲಕ್ಷ ಹಣ ಪತ್ತೆಯಾಗಿದೆ. ಸಿಬಿಐ ಅಧಿಕಾರಿಗಳು ಆ ಹಣವನ್ನು ವಶಕ್ಕೆ ಪಡೆದಿದ್ದಾರೆ.
