ಪರಿಸರ ಮಾಲಿನ್ಯ ತಡೆಗಟ್ಟುವ ಹಾಗೂ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿಗೆ ಸದ್ಯದಲ್ಲಿಯೇ ವಿದ್ಯುತ್ ಬಸ್ಗಳು ಲಭಿಸಲಿವೆ.
ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬಿಎಂಟಿಸಿಗೆ 90 ಹಾಗೂ ಕೆಎಸ್ಆರ್ಟಿಸಿಗೆ (ಅಂತರ ನಗರ ಸಂಚಾರ) 50 ಬಸ್ಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಅದು ಅಂತಿಮ ಹಂತ ತಲುಪಿದೆ.
ಕೇಂದ್ರ ಸರ್ಕಾರ ಕೂಡ ತನ್ನ ಪಾಲಿನ ಹಣ ನೀಡುವುದರಿಂದ ರಾಜ್ಯ ಸರ್ಕಾರ ಕೂಡ ಸಾರಿಗೆ ಇಲಾಖೆಗೆ ಅನುದಾನ ಬಿಡುಗಡೆ ಮಾಡಬೇಕಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಸದ್ಯದಲ್ಲಿಯೇ ಪೂರ್ಣಗೊಳ್ಳುವ ವಿಶ್ವಾಸವಿದ್ದರೂ ಸಹ ಕೊರೊನಾ ಸಂಕಷ್ಟ ದೂರವಾದ ನಂತರ ಬಸ್ಗಳು ರಸ್ತೆಗಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
