ಬೆಂಗಳೂರು: ಮಾಜಿ ಸಚಿವ ಕೆ.ಬಿ.ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಕೆ.ಬಿ.ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ನಾಯಕರಾಗಿ, ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು, ಸದನದಲ್ಲಿ ಸದಾ ನೊಂದ ಜನರ ದನಿಯಾಗಿದ್ದರು.
ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
