ಬೆಂಗಳೂರು : ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಸಾಹಿತಿ, ಕವಿ, ಪ್ರವಚನಕಾರ ಉಡುಪಿಯ ಡಾ. ಬನ್ನಂಜೆ ಗೋವಿಂದಾಚಾರ್ಯರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅನೇಕ ಸಂಸ್ಕೃತ, ಕನ್ನಡ ಗ್ರಂಥಗಳನ್ನು ಅವರು ರಚಿಸಿದ್ದರು.
ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಓಂ ಶಾಂತಿ ಎಂದು ಹೇಳಿದರು.

ವರದಿ: ಸಿಸಿಲ್ ಸೋಮನ್
