ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಇಂದು ಮುಂಜಾನೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ, ಈಗಾಗಲೇ ಡಿ.ಕೆ.ಶಿವಕುಮಾರ್ ಅವರ ಮೇಲೆ ಆದಾಯ ತೆರಿಗೆ ಹಾಗೂ ಇಡಿ ದಾಳಿ ನಡೆದಿತ್ತು ಎಂದು ಈ ಸಮಯದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಇಂಥ ವಿಚಾರದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ, ಉಪ ಚುನಾವಣೆಗೂ ಈ ದಾಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
