ಸೊರಬ: ಸೊರಬ ರಂಗಮಂದಿರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರುಗಳಿಗೆ ತರಭೇತಿ ಮತ್ತು ಗ್ರಾಮಗಳ ಕೆರೆಗಳ ಪುನಶ್ಚೇತನ ಕುರಿತಾದ ಕಾರ್ಯಕ್ರಮ – ಶಾಸಕ ಕುಮಾರ್ ಬಂಗಾರಪ್ಪ.
ದಿನಾಂಕ 27.08.2021 ರ ಶುಕ್ರವಾರದಂದು ಸೊರಬ ರಂಗಮಂದಿರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರುಗಳಿಗೆ ತರಭೇತಿ ಮತ್ತು ಗ್ರಾಮಗಳ ಕೆರೆಗಳ ಪುನಶ್ಚೇತನ ಕುರಿತಾದ ಕಾರ್ಯಕ್ರಮಕ್ಕೆ ಕರ್ನಾಟಕದಲ್ಲಿ ಮೊಟ್ಟ ಮೊದಲು ಸೊರಬ ತಾಲ್ಲೂಕಿನಿಂದಲೇ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಕೆ.ಎಸ್ ಈಶ್ವರಪ್ಪ ನವರೊಂದಿಗೆ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದೆನು.
ಮಾನ್ಯ ಸಚಿವರು ಮತ್ತು ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳೊಂದಿಗೆ ತರಬೇತಿ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂಧರ್ಭದಲ್ಲಿ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ ರವರು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮತಿ ವೈಶಾಲಿ ರವರು, ಪುರಸಭೆ ಅಧ್ಯಕ್ಷರಾದ ಶ್ರೀ ಎಂ.ಡಿ ಉಮೇಶ್ ರವರು ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.