ಹೋಬಳಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ದಿನಸಿ ಮತ್ತು ತರಕಾರಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕೂಟಗಲ್ ಹೋಬಳಿಯ ಜಾಲಮಂಗಲದಲ್ಲಿ ಮಾಜಿ ಶಾಸಕ ಎಚ್. ಬಾಲಕೃಷ್ಣ ಅವರು ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ದಿನಸಿ ಮತ್ತು ತರಕಾರಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ಚಾಲನೆ ನೀಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಲಿಂಗಪ್ಪ, ಎಸ್. ರವಿ, ಜಿಪಂ ಅಧ್ಯಕ್ಷ ಎಚ್.ಎನ್.ಅಶೋಕ್, ತಾಪಂ ಮಾಜಿ ಅಧ್ಯಕ್ಷರಾದ ಮಹದೇವ, ಜಗದೀಶ್, ಗಾಣಕಲ್ ನಟರಾಜು, ಮುಖಂಡರಾದ ಗಂಗಾಧರ, ಕೆ. ರಮೇಶ್, ಕಾಂತಾರಾಜು ಪಟೇಲ್ ಮತ್ತಿತರರು ಉಪಸ್ಥಿತರಿದ್ದರು. ಕೊರೋನಾ ವಾರಿಯರ್ಸ್ ಗಳಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನವನ್ನೂ ನೀಡಲಾಯಿತು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.