ಸಾಗರ: ಅತಿವೃಷ್ಟಿಯಿಂದಾಗಿರುವ ಹಾನಿಗಳ ಬಗ್ಗೆ ಹಾಗೂ ಕೋವಿಡ್-19 ತಡೆಗಟ್ಟುವ ಬಗ್ಗೆ ಸಾಗರದ ಗಾಂಧಿ ಮೈದಾನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ – ಹೆಚ್.ಹಾಲಪ್ಪ ಹರತಾಳು

ಅತಿವೃಷ್ಟಿಯಿಂದಾಗಿರುವ ಹಾನಿಗಳ ಬಗ್ಗೆ ಹಾಗೂ ಕೋವಿಡ್-19 ತಡೆಗಟ್ಟುವ ಬಗ್ಗೆ ಸಾಗರದ ಗಾಂಧಿ ಮೈದಾನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನೆಡೆಸಲಾಯಿತು. ಕೋವಿಡ್ 3 ನೇ ಅಲೆ ಪ್ರಾರಂಭವಾಗುವ ಲಕ್ಷಣಗಳಿದ್ದು, ಸೋಂಕು ಮಕ್ಕಳ ಮೇಲೆ ಪರಿಣಾಮ ಬೀರುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸೋಂಕಿನ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ಮುಂಜಾಗ್ರತ ವಾಗಿ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮಕ್ಕಳ ಚಿಕಿತ್ಸೆಗಾಗಿ 20 ಬೆಡ್ ಗಳ ಪ್ರತ್ಯೇಕ ಕೊಠಡಿ ತೆರೆಯುವ ಬಗ್ಗೆ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಹಾಗೂ ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ್ದು ಪರಿಹಾರ ನೀಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
