ಬೆಂಗಳೂರು: ಇಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹಾಸಿಗೆ ಮತ್ತು ಆಕ್ಸಿಜನ್ ಬಗ್ಗೆ ಮಾಹಿತಿ ಪಡೆದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹಾಸಿಗೆ ಮತ್ತು ಆಕ್ಸಿಜನ್ ಬಗ್ಗೆ ಮಾಹಿತಿ ಪಡೆದರು. ಆಕ್ಸಿಜನ್, ರೆಮಿಡಿಸಿವರ್ ನಲ್ಲಿ ಕೊರತೆ ಕಂಡುಬಂದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ಆಕ್ಸಿಜನ್ ಸರಬರಾಜು ಜಾಲದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಬೇಕು, ಜೊತೆಗೆ ಯಾವುದೇ ತಕ್ಷಣದ ಅಗತ್ಯತೆ ಕಂಡು ಬಂದರೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಅಥವಾ ತಮ್ಮ ಗಮನಕ್ಕೆ ಕೂಡಲೇ ತರಬೇಕು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವರದಿ: ಸಿಸಿಲ್ ಸೋಮನ್

