Politics

ಉಪಚುನಾವಣೆಯಲ್ಲಿ ಮೈತ್ರಿಯ ಪ್ರಶ್ನೆಯೇ ಉದ್ಭವಿಸುವುದಿಲ್ಲ – ಕುಮಾರಸ್ವಾಮಿ

ನವೆಂಬರ್‌ 3ರಂದು ಶಿರಾ ಹಾಗೂ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್​.ಆರ್​. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಆರ್​.ಆರ್​. ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧವಾಗಿದೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್​ಗೆ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವುದು ಸವಾಲಿನ ಕೆಲಸವಾಗಿದೆ. ಹೀಗಿದ್ದರೂ ನಾವು ಮಾನಸಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಎಚ್​.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published.

seventeen + two =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us