ಈಗ ರಾಜ್ಯದಲ್ಲಿ ಉಪ ಚುನಾವಣೆ ಇದೆ. ಈ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ಆಗಿದೆ. ತಪ್ಪು ಆಗಿದ್ರೆ ದಾಳಿ ಮಾಡಲು ಅಧಿಕಾರ ಇದೆ. ಆದರೆ, ರಾಜಕೀಯ ಪ್ರೇರಿತ ದಾಳಿ ಬೇಡ. ಈ ರೀತಿಯ ದಾಳಿ ಎಷ್ಟು ಬಾರಿ ಮಾಡಿದ್ದೀರಿ ಎಂದು ಬಿಜೆಪಿ ವಿರುದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಡಿಕೆಶಿ ಸಹೋದರರ ಮನೆ ಮೇಲೆ ಸಿಬಿಐ ದಾಳಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿ ಅವರು, ಬಿಜೆಪಿ ಸರ್ಕಾರದ ವಿರುದ್ಧ ಜೈಲು ಬರೋ ಚಳುವಳಿ ಆರಂಭ ಮಾಡಬೇಕಿದೆ, ಬಿಜೆಪಿ ಸಿದ್ದಾಂತವನ್ನ ಜಾರಿ ಮಾಡುವುದಕ್ಕೆ ಹೋಗಬೇಡಿ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
