ವೈದ್ಯಕೀಯ ಸಾಧನ ಕ್ಷೇತ್ರದಲ್ಲಿ ಹೂಡಿಕೆಗೆ ಸಕಾಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಔಷಧ ಕ್ಷೇತ್ರ 2024 ರ ವೇಳೆಗೆ 65 ಶತಕೋಟಿ ಡಾಲರ್ ಮತ್ತು 2030 ರ ವೇಳೆಗೆ 120 ಶತಕೋಟಿ ಡಾಲರ್ ಉದ್ಯಮವಾಗಿ ಬೆಳೆಯುವ ಸಾಧ್ಯತೆಯಿದೆ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ “ಸಿಐಐ ಲೈಫ್ ಸೈನ್ಸ್ ಕಾನ್ಕ್ಲೇವ್ 2020” ರ ಉದ್ಘಾಟಿಸಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ವ್ಯಾಪಾರ ಸ್ನೇಹಿ ಸುಧಾರಣೆಗಳಿಂದಾಗಿ ಉದಯೋನ್ಮುಖ ಆರ್ಥಿಕತೆಗಳಲ್ಲಿ ಭಾರತ ಅತ್ಯುತ್ತಮ ಹೂಡಿಕೆಯ ತಾಣಗಳಲ್ಲಿ ಒಂದಾಗಿ ಹೊರಹೊಮ್ಮಲು ಕಾರಣವಾಗಿದೆ ಎಂದು ಅವರು ಹೇಳಿದರು.
