ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ಕೋವಿಡ್ 2ನೇ ಅಲೆಯ ಪರಿಹಾರ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಸರ್ಕಾರದಿಂದ ಘೋಷಣೆ ಮಾಡಿರುವ ಕೋವಿಡ್ 2ನೇ ಅಲೆಯ ಪರಿಹಾರ ಸಹಾಯಧನವನ್ನು ನೇರವಾಗಿ ಅವರುಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ, ಕಾರ್ಮಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಕಾರ್ಮಿಕ ಆಯುಕ್ತ ಅಕ್ರಮ್ ಪಾಷಾ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
