ಕನಕಪುರ: ಕನಕಪುರ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುರುವಾರ ಮಧ್ಯಾಹ್ನ ದಿಢೀರ್ ಭೇಟಿ.

ಸ್ವಕ್ಷೇತ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ.
ಕೊರೋನಾ ಸೋಂಕಿತರಿಗೆ ನೀಡುತ್ತಿರುವ ಔಷಧೋಪಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಿವಕುಮಾರ್.
ಆರೋಗ್ಯಾಧಿಕಾರಿಗಳು, ತಹಶೀಲ್ದಾರ್, ನಗರಸಭೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ.
ಕನಕಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 231 ಕೊರೋನಾ ಸೋಂಕಿತರು.
ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಡಿ.ಕೆ. ಶಿವಕುಮಾರ್.
ಅಗತ್ಯ ಔಷದೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟ ಶಿವಕುಮಾರ್.

ವರದಿ: ಸಿಸಿಲ್ ಸೋಮನ್

