ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಣದ ನಿಟ್ಟಿನಲ್ಲಿ ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಕಾರ್ಯಾಚರಣೆ.

ಕೋವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ನಿನ್ನೆ ಆಸ್ಪತ್ರೆಯಿಂದಲೇ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯಕೀಯ ಸಿಬ್ಬಂದಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು ಮತ್ತು ಅಗತ್ಯ ಸೂಚನೆಗಳನ್ನು ನೀಡಿದರು.

ವರದಿ: ಸಿಸಿಲ್ ಸೋಮನ್

