ಕೋಲಾರ: ಕೋಲಾರದ ಮಾಲೂರಿನಲ್ಲಿ ಶಾಸಕ ನಂಜೇಗೌಡ ಅವರು ಹಮ್ಮಿಕೊಂಡಿರುವ 36 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಲನೆ.

ಕೋಲಾರದ ಮಾಲೂರಿನಲ್ಲಿ ಶಾಸಕ ನಂಜೇಗೌಡ ಅವರು ಹಮ್ಮಿಕೊಂಡಿರುವ 36 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್, ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರ ನೆರವಿಗೆಂದು ನಾಲ್ಕು ಆಂಬುಲೆನ್ಸ್ ವಾಹಗಳನ್ನು ಕಾಂಗ್ರೆಸ್ ವತಿಯಿಂದ ನಿಯೋಜಿಸಲಾಯಿತು. ಸ್ಥಳೀಯ ಕಾಂಗ್ರೆಸ್ ಕಚೇರಿಯನ್ನು ಇಂದಿರಾ ಕ್ಯಾಂಟೀನ್ ಸ್ವರೂಪದಲ್ಲಿ ಪರಿವರ್ತಿಸಲಾಗಿದ್ದು, ನಿತ್ಯ 2000 ಮಂದಿ ಬಡವರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕರಾದ ರೂಪಾ ಶಶಿಧರ್, ಶರತ್ ಬಚ್ಚೇಗೌಡ, ಎಂಎಲ್ಸಿ ನಾಸೀರ್ ಅಹಮದ್, ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ವಿ.ಆರ್. ಸುದರ್ಶನ್ ಮತ್ತಿತರರು ಹಾಜರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
