ಸಾಗರ: ಕೋವಿಡ್-19 ಸಂದರ್ಭದಲ್ಲಿ ಸೋಂಕಿನ ನಿಯಂತ್ರಣ ಹಾಗೂ ಸೋಂಕಿತರಿಗೆ ಅನುಕೂಲವಾಗುವಂತೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಪತ್ರಿಕಾ ಗೋಷ್ಠಿ – ಶಾಸಕರು ಹೆಚ್.ಹಾಲಪ್ಪ.

ಕೋವಿಡ್-19 ಸಂದರ್ಭದಲ್ಲಿ ಸೋಂಕಿನ ನಿಯಂತ್ರಣ ಹಾಗೂ ಸೋಂಕಿತರಿಗೆ ಅನುಕೂಲವಾಗುವಂತೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಪತ್ರಿಕಾ ಗೋಷ್ಠಿ ನೆಡೆಸಿ ಮಾಹಿತಿ ನೀಡಲಾಯಿತು.

ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ “ಆಕ್ಸಿಜನ್ ಪ್ಲಾಂಟ್” ಕಾಮಗಾರಿಗೆ ಚಾಲನೆ. ಉಪ ವಿಭಾಗೀಯ ಆಸ್ಪತ್ರೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಿಂದ 7 ಲೀ ಸಾಮರ್ಥ್ಯದ 10 ಕಾನ್ಸನ್ಟ್ರೇಟರ್ ಹಾಗೂ MSIL ವತಿಯಿಂದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ ಸರಬರಾಜು. ಉಪ ವಿಭಾಗೀಯ ಆಸ್ಪತ್ರೆಗೆ 150 ಕಿ.ವ್ಯಾ ಸಾಮರ್ಥ್ಯದ ಜನರೇಟರ್ ವ್ಯವಸ್ಥೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಉಪ ವಿಭಾಗೀಯ ಆಸ್ಪತ್ರೆಗೆ ಕುಡಿಯುವ ನೀರಿಗಾಗಿ ಕೊಳವೆ ಬಾವಿ ನಿರ್ಮಾಣ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಿಂದ ಆಸ್ಪತ್ರೆಯ 40 ಹಾಸಿಗಳ ಕೊಠಡಿ ದುರಸ್ಥಿ. ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಮೊದಲಿದ್ದ 53 ಆಕ್ಸಿಜನ್ ಬೆಡ್ ಗಳ ಸಂಖ್ಯೆಯನ್ನು 117ಕ್ಕೆ ಏರಿಸಲಾಗಿದೆ. ಜಂಬಗಾರು ವಿದ್ಯಾರ್ಥಿನಿ ನಿಲಯದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ನಿರ್ಮಾಣ.
ಕೋವಿಡ್ ಪೀಡಿತ ರೋಗಿಗಳಿಗೆ (250) ಪ್ರತಿನಿತ್ಯ ಊಟ ವಿತರಣೆ. ಇಂದಿರಾ ಕ್ಯಾಂಟೀನ್ ಉದ್ಘಾಟನೆ. ಸರ್ಕಾರದ ವತಿಯಿಂದ 30 ಆಕ್ಸಿಜನ್ ಬೆಡ್ ಗಳ ಖಾಸಗಿ ಆಸ್ಪತ್ರೆ ವಹಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಹಾಲಿ 15 ಜನ ದಾಖಲಾಗಿದ್ದಾರೆ. ಉಪ ವಿಭಾಗೀಯ ಆಸ್ಪತ್ರೆಯ ಕೋವಿಡ್ ರೋಗಿಗಳಿಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಶವ ಸಾಗಣಿಕೆಗೆ ಪ್ರತ್ಯಕ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ .
ಉಪ ವಿಭಾಗೀಯ ಆಸ್ಪತ್ರೆಗೆ 3 ನೂತನ ವೈದ್ಯರ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಗಾಂಧಿ ಮೈದಾನದಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತು ಹೊರ ರೋಗಿಗಳ ತಪಾಸಣಾ ಕೇಂದ್ರ ಆರಂಭಿಸಲು ಸಿದ್ಧಪಡಿಸಲಾಗಿದೆ. ಕೋವಿಡ್ 3ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಪೂರ್ವ ತಯಾರಿ ಮಾಡಲಾಗಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
