ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ರವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.
ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ರವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ, ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಿಂದ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು.
ಆರೋಗ್ಯ ಸಚಿವ , ಗೃಹ ಸಚಿವ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಉಪಸ್ಥಿತರಿದ್ದು, ಈ ಸಭೆಯಲ್ಲಿ ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

