Politics

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ಶ್ರೀ ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ.

ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ಸರ್ಕಾರ ನಾಯಕರು, ಈಗ ಪ್ರಧಾನಮಂತ್ರಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ.

ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಮಂತ್ರಿ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ.

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ.

ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು.

ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಮಂತ್ರಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ.

ವರದಿಸಿಸಿಲ್ ಸೋಮನ್

Click to comment

Leave a Reply

Your email address will not be published.

14 + 15 =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us