ಬೆಂಗಳೂರು: ಮುಖ್ಯಮಂತ್ರಿ ರವರು ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನಗಳನ್ನು ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತಿತರರು ಉಪಸ್ಥಿತರಿದ್ದರು.

ನಂತರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಹಿನ್ನಲೆಯಲ್ಲಿ ‘ರಾಷ್ಟ್ರೀಯ ಏಕತಾ ದಿವಸ’ದ ಆಚರಣೆಗೆ ಚಾಲನೆ ನೀಡಲಾಯಿತು. ಸರ್ದಾರ್ ಪಟೇಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
