ಸಾಗರ: ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಚರ್ಚಿ – ಶಾಸಕ ಹೆಚ್.ಹಾಲಪ್ಪ.

ಶಾಸಕರಾದ ಹೆಚ್.ಹಾಲಪ್ಪ ನವರು ಶರಾವತಿ ಮುಳುಗಡೆ ಸಂತ್ರಸ್ತರ ನಿಯೋಗದೊಂದಿಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು, ಸಂಸದರಾದ ಬಿ.ವೈ ರಾಘವೇಂದ್ರ ರವರು, ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಶರಾವತಿ ಅಭಯಾರಣ್ಯ, ಶೆಟ್ಟಿಹಳ್ಳಿ ಅಭಯಾರಣ್ಯ ಎಂದು ಘೋಷಿಸಿ, ಮುಳುಗಡೆ ಸಂತ್ರಸ್ತರ ಬದುಕು ದುಸ್ಥಿರವಾಗಿದೆ. ಕಾನೂನು ತೊಡಕುಗಳನ್ನು ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳು, ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಇದರ ಮುಂದಿನ ಸಭೆಯನ್ನು ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಕಂದಾಯ, ಅರಣ್ಯ, ಹಾಗೂ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಮುಳುಗಡೆ ಸಂತ್ರಸ್ಥರು ಸಾಗುವಳಿ ಮಾಡಿಕೊಂಡು ಬಂದಿರುವ ಜಮೀನನ್ನು ಸಂತ್ರಸ್ತರಿಗೆ ಸಾಗುವಳಿ ದಾಖಲಾತಿ ಮಾಡಿಕೊಡುವ ಬಗ್ಗೆ, ಕಾನೂನು ಮಾರ್ಪಾಡು ಮಾಡುವ ಬಗ್ಗೆ ಸಭೆ ನೆಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
