ಕಾಂಗ್ರೆಸ್ ಪಕ್ಷ ಮೈತ್ರಿಗೆ ಅರ್ಹವಲ್ಲ. ಮೈತ್ರಿ ಧರ್ಮವನ್ನು ಒಪ್ಪದ ಆ ಪಕ್ಷದ ಜೊತೆ ಎಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
“ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ. “
ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ,ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ,ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ.”ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
WhatsApp us