ಸಾಗರ: ಸಾಗರದಲ್ಲಿ ಶಿವಮೊಗ್ಗ ಜಿಲ್ಲಾ ವಿದ್ಯಾರ್ಥಿ ಒಕ್ಕೂಟ ಹಾಗೂ NSUI ವತಿಯಿಂದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಮನವಿ.
ಇಂದು ಸಾಗರದಲ್ಲಿ ಶಿವಮೊಗ್ಗ ಜಿಲ್ಲಾ ವಿದ್ಯಾರ್ಥಿ ಒಕ್ಕೂಟ ಹಾಗೂ NSUI ವತಿಯಿಂದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಸಿ.ಎಂ ಚಿನ್ಮಯ್ ರವರು ಮಾತನಾಡಿ ಶಿಕ್ಷಣ ಸಚಿವರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣರಾಗಿ ಮಾಡಲು ಮನವಿ ಮಾಡಿದರು ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಉತ್ತೀರ್ಣರಾಗಿ ಮಾಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡಿದರು. ಈ ನಮ್ಮ ಸರ್ಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಹಾಗೂ ಎಲ್ಲಾ ವಿದ್ಯಾರ್ಥಿಗಳ ನಡುವೆ ಭೇದ ಭಾವ ಮಾಡಿ ಪರೀಕ್ಷೆ ನಡೆಸುವುದಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಲಾಗುತ್ತದೆ ಎಂದು ಹೇಳಿದರು. ಈ ವೇಳೆ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿ ಒಕ್ಕೂತದ ಜಿಲ್ಲಾಧ್ಯಕ್ಷರಾದ ಸಿ.ಎಂ ಚಿನ್ಮಯ್, NSUI ಉಪಾಧ್ಯಕ್ಷರಾದ ರಾಮ್ ಕುಮಾರ್ (ಚಿಂಟು), ಫ್ರುಖನ್ ವಿಶ್ವಾಸ್ ಉಳ್ಳೂರು, ನವೀನ್ ಕೋಟೆಕೊಪ್ಪ , ದೀಪಕ್ ಉಳ್ಳೂರು ಹಾಗೂ ಇನ್ನಿತರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
