ಬೆಂಗಳೂರು: ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದಶಕಗಳ ಕಾಲ ತಮ್ಮ ಅಭಿನಯ ಪ್ರತಿಭೆಯಿಂದ ಚಿತ್ರರಂಗದ ದಿಗ್ಗಜ ಸ್ಥಾನಕ್ಕೇರಿದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಪದ್ಮವಿಭೂಷಣ ದಿಲೀಪ್ ಕುಮಾರ್ ಅವರ ನಿಧನದಿಂದ ಯುಗವೊಂದು ಅಂತ್ಯವಾದಂತಾಗಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ, ಅಸಂಖ್ಯಾತ ಅಭಿಮಾನಿಗಳಿಗೆ ಆ ಮಹಾನ್ ಕಲಾವಿದನನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
