ಬೆಂಗಳೂರು: ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು.

ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
