ಹುಬ್ಬಳ್ಳಿ: ಹುಬ್ಬಳ್ಳಿಗೆ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ಸ್ವಾಗತ ಮಾಡಿದ ಕ್ಷಣ – ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು.

‘ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ನಿದ್ರಾವಸ್ಥೆಯಲ್ಲಿದ್ದ ರಾಜ್ಯ ಸರ್ಕಾರವನ್ನು ಎಚ್ಚರಿಸಿ, ಕೆಲಸಕ್ಕೆ ಇಳಿಸಿದ್ದೆ ಕಾಂಗ್ರೆಸ್ ಪಕ್ಷ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;

ಲಾಕ್ ಡೌನ್ ಸಮಯದಲ್ಲಿ ಸರ್ಕಾರ ಕೊಟ್ಟ ಯಾವುದೇ ಭರವಸೆ ಈಡೇರಲಿಲ್ಲ. ಅವರು ಕೇವಲ ದೀಪ ಹಚ್ಚಿಸಿ, ಚಪ್ಪಾಳೆ ಹೊಡೆಸಿ, ಜಾಗಟೆ ಬಾರಿಸುವಂತೆ ಮಾಡಿದ್ದರು ಅಷ್ಟೇ. ನಾನು ಹಾಗೂ ವಿರೋಧ ಪಕ್ಷದ ನಾಯಕರು ಸೇರಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಿ ಸರ್ವಪಕ್ಷ ಸಭೆ ಕರೆಯುವಂತೆ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮಾಡಿದೆವು.
ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಹೋರಾಟ ಮಾಡಿದೆವು. ನಂತರ ಇದು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಯಿತು. ರಾಜ್ಯದ ಪ್ರತಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಸ್ವಂತ ಹಣದಲ್ಲಿ ಬಡವರಿಗೆ ಆಹಾರ ಕಿಟ್ ನೀಡಿದರು. ಆಂಬುಲೆನ್ಸ್, ಮೆಟಿಕಲ್ ಕಿಟ್ ಪೂರೈಸಿದರು. ಆದರೆ ಬಿಜೆಪಿ ನಾಯಕರು ಸರ್ಕಾರದ ಆಹಾರ ಕಿಟ್ ಗಳ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಪಡೆದರು.
ಇನ್ನು ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಸರ್ಕಾರ ಸುಳ್ಳು ಲೆಕ್ಕ ನೀಡಿತ್ತು. ಆದರೆ ನಾನು ಹಾಗೂ ವಿರೋಧ ಪಕ್ಷದ ನಾಯಕರು ಈ ಸುಳ್ಳು ಬಯಲು ಮಾಡಿದೆವು. ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ಕೋವಿಡ್ ಗೆ ಬಲಿಯಾಗಿದ್ದು, ಸರ್ಕಾರ ಡೆತ್ ಆಡಿಟ್ ಮಾಡಿಲ್ಲ. ರೈತರಿಗೆ ಘೋಷಿಸಿದ ಪರಿಹಾರವನ್ನು ಇನ್ನೂ ನೀಡಿಲ್ಲ. ಇನ್ನು ಚಾಲಕರಿಗೆ ಪ್ಯಾಕೇಜ್ ಘೋಷಿಸಿ 25 ಲಕ್ಷ ಚಾಲಕರ ಪೈಕಿ 8.5 ಲಕ್ಷ ಚಾಲಕರು ನೋಂದಣಿಯಾಗಿದ್ದು, ಅದರಲ್ಲಿ ಪರಿಹಾರ ಪಡೆದವರು ಕೇವಲ ಒಂದೂವರೆ ಲಕ್ಷ ಮಂದಿ ಮಾತ್ರ. ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ?
ಕೋವಿಡ್ ಹೆಸರಲ್ಲಿ ಬಿಜೆಪಿ ಸರ್ಕಾರ ಕೊಳ್ಳೆ ಹೊಡೆದಿದೆ. ಅವರ ಭ್ರಷ್ಟಾಚಾರವನ್ನು ನಾವು ಬಯಲಿಗೆಳೆದಿದ್ದೇವೆ. ಹಾಸಿಗೆಯಿಂದ ಹಿಡಿದು ಲಸಿಕೆ, ಆಕ್ಸಿಜನ್, ಚಿಕಿತ್ಸೆ, ಶವ ಸಂಸ್ಕಾರದವರೆಗೆ ಎಲ್ಲದಕ್ಕೂ ಕ್ಯೂ ನಿಲ್ಲುವಂತೆ ಮಾಡಿದರು. ತೇಜಸ್ವಿ ಸೂರ್ಯ ಅವರು ಬಯಲಿಗೆಳೆದ ಹಾಸಿಗೆ ಹಗರಣದ ವಾರಸುದಾರರು ಯಾರು? ವಿರೋಧ ಪಕ್ಷವಾಗಿ ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ನಮ್ಮ ನಾಯಕರ ಸೇವೆಗೆ ನಾವು ಹೆಮ್ಮೆ ಪಡುತ್ತೇವೆ. ರಾಜ್ಯದಲ್ಲಿ 2 ಕೋಟಿಗೂ ಹೆಚ್ಚು ಜನರಿಗೆ ನೆರವಾಗಿದ್ದೇವೆ. ಸರ್ಕಾರ ಸಣ್ಣ ತೆರಿಗೆಯನ್ನೂ ಕಡಿಮೆ ಮಾಡಿ ಜನಸಾಮಾನ್ಯರಿಗೆ ನೆರವಾಗಲಿಲ್ಲ. ಕೋವಿಡ್ ನಿಂದ ಬದುಕು ಕಳೆದುಕೊಂಡಿದ್ದವರ ತಲೆ ಮೇಲೆ ತೆರಿಗೆ ಹೊರೆ ಹೇರಿ ಅಮಾನವೀಯವಾಗಿ ನಡೆದುಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲೂ ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ.’

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
