ಹೊಸನಗರ: ಹೊಸನಗರದಲ್ಲಿ 30 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾರ್ಯ ಪೂರ್ಣ – ಶಾಸಕರಾದ ಹೆಚ್.ಹಾಲಪ್ಪ.

ಹೊಸನಗರದಲ್ಲಿ 30 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಲಾಯಿತು.

ಹಾಸಿಗಳ ಅಗತ್ಯತೆಗೆ ತಕ್ಕಂತೆ ಆಕ್ಸಿಜನ್, ವೆಂಟಿಲೇಟರ್ ಗಳನ್ನು ನಿಯೋಜಿಸಿದ ನಂತರ ಕಾರ್ಯಾರಂಭವಾಗುವುದು,ಸಾರ್ವಜನಿಕ ಆಸ್ಪತ್ರೆಗೆ ಮತ್ತು ಕೋವಿಡ್ ಕೇರ್ ಸೆಂಟರ್ ಗೆ ಹೆಚ್ಚುವರಿ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವಂತೆ, ನಗು-ಮಗು ಆಂಬ್ಯುಲೆನ್ಸ್ ನಿಷ್ಕ್ರಿಯವಾಗಿದ್ದು ಶೀಘ್ರದಲ್ಲಿ ಸರಿ ಪಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿ,ಸಭೆ ಸಮಾರಂಭಗಳಲ್ಲಿ ಅತಿ ಹೆಚ್ಚು ಜನ ಸೇರುತ್ತಿರುವುದರಿಂದ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ನಂತರ ಅಧಿಕಾರಿಗಳು, ಪತ್ರಕರ್ತರಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಿಸಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
