ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.
ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಹೇಳಿದರು.

ವರದಿ: ಸಿಸಿಲ್ ಸೋಮನ್

WhatsApp us