ಇಂದು (06-09-2020) ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ರವರು ಹಾಗೂ MSIL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀಹೆಚ್.ಹಾಲಪ್ಪ ನವರು
ಗರ್ತಿಕೆರೆ ಸಮೀಪದ ಶ್ರೀ ನಾರಾಯಣಗುರು ಸಂಸ್ಥಾನ (ರಿ) ನಿಟ್ಟೂರು ನಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ರೇಣುಕಾನಂದ ಸ್ವಾಮೀಜಿ ಯವರು, ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಯವರು, ಎಂ.ಎ.ಡಿ.ಬಿ ಅಧ್ಯಕ್ಷರಾದ ಗುರುಮೂರ್ತಿ ರವರು, ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ಡಾ.ರಾಮಪ್ಪ ನವರು, ಹೊಸನಗರ ತಾ.ಪಂ ಅಧ್ಯಕ್ಷರು, ಜಿ.ಪಂ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.



