ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಎಂದು ಅವರು ಹೇಳಿದ್ದಾರೆ
ವಿಶ್ವ ವಿಖ್ಯಾತ ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗಾಗಲೇ 120ಕೋಟಿ ರೂ. ಅನುಮೋದನೆ ನೀಡಿದ್ದು, ಎಲ್ಲಾ ಮೂಲಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ರೂಪಿಸಬೇಕಾಗಿದೆ ಎಂದು ಲೋಕಸಭಾ ಸದಸ್ಯ ಶ್ರೀ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ಜೋಗ ಅಭಿವೃದ್ಧಿಗೆ ನೀಲ ನಕಾಶೆ ರೂಪಿಸುವ ಕುರಿತು ಇಂದು ಜೋಗದ ಕೆಪಿಟಿಸಿಎಲ್ ಸಭಾಂಗಣದಲ್ಲಿ ನಡೆಸಿದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜೋಗದಲ್ಲಿ ಪ್ರವಾಸಿಗರು ಕನಿಷ್ಟ ಒಂದು ಇಡೀ ದಿನ ರಜಾದಿನ ಆಸ್ವಾದಿಸಲು ಅವಕಾಶ ಕಲ್ಪಿಸಬೇಕಾಗಿದೆ. ಈಗಿರುವ ಸೌಲಭ್ಯಗಳನ್ನು ಉತ್ತಮಪಡಿಸುವ ಜತೆಗೆ ಇನ್ನಷ್ಟು ಹೊಸ ಮೂಲಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮಾತ್ರವಲ್ಲದೆ ಕೆಪಿಟಿಸಿಎಲ್ ಪಾತ್ರವೂ ಬಹಳ ಮುಖ್ಯವಾಗಿದೆ.ಜೋಗ ಅಭಿವೃದ್ಧಿ ನಿಟ್ಟಿನಲ್ಲಿ ಇದು ಎರಡನೇ ಸಭೆಯಾಗಿದ್ದು,ತಜ್ಞರ ಸಲಹೆಗಳನ್ನು ಪಡೆದು ಆದಷ್ಟು ಬೇಗನೆ ನೀಲ ನಕಾಶೆ ಅಂತಿಮಗೊಳಿಸಿ ಟೆಂಡರ್ ಕರೆಯುವ ಪ್ರಕ್ರಿಯೆಯನ್ನು ಆರಂಭಿಸಬೇಕಾಗಿದೆ ಎಂದು ಅವರು ಹೇಳಿದರು.
ಇಲ್ಲಿನ 22ಎಕ್ರೆ ಪ್ರದೇಶದಲ್ಲಿ ವೀಕ್ಷಣಾ ಗೋಪುರ, ಕಾರಂಜಿಗಳ ನಿರ್ಮಾಣ, ವಿಶ್ರಾಂತಿ ಗೃಹಗಳು, ಉದ್ಯಾನವನ, ವಿದ್ಯುದಾಗಾರಕ್ಕೆ ಪ್ರವಾಸಿಗರಿಗೆ ವೀಕ್ಷಣಾ ಅವಕಾಶ, ಮಳೆಗಾಲ ಹೊರತುಪಡಿಸಿ ಪ್ರತಿ ಶನಿವಾರ ಮತ್ತು ಭಾನುವಾರ ಜಲಪಾತಕ್ಕೆ ನೀರು ಹರಿಸುವ ಪ್ರಸ್ತಾವನೆಗಳಿಗೆ ಅಂತಿಮ ರೂಪು ನೀಡಬೇಕಾಗಿದೆ ಎಂದು ಹೇಳಿದರು.
ಕೆಪಿಟಿಸಿಲ್ ಮ್ಯಾನೇಜಿಂಗ್ ಡೈರೆಕ್ಟರ್ ಪೊನ್ನುರಾಜ್ ಅವರು ಮಾತನಾಡಿ, ಜೋಗದಲ್ಲಿ ಕೆಪಿಟಿಸಿಎಲ್‍ಗೆ ಸೇರಿದ ಹಲವು ಆಸ್ತಿಪಾಸ್ತಿಗಳಿವೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಪವರ್ ಸ್ಟೇಷನ್, ಆಸ್ಪತ್ರೆ ಇತ್ಯಾದಿ ಕಟ್ಟಡಗಳನ್ನು ಬಳಸಿಕೊಳ್ಳಬಹುದಾಗಿದ್ದು, ಕೆಪಿಟಿಸಿಎಲ್ ಎಲ್ಲಾ ಸಹಕಾರ ನೀಡಲಿದೆ ಎಂದು ಹೇಳಿದರು.ಈ ಸಂಭ್ರಮದಲ್ಲಿ ಮಲೆನಾಡ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಗುರುಮೂರ್ತಿ,ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಪಡೆ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಾಶಿ,ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ಟಿಡಿ ಮೇಘರಾಜ್,ಜಿಲ್ಲಾ ಪಂಚಾಯತ ಸದಸ್ಯ ಶ್ರೀ ರಾಜಶೇಖರ್ ಗಾಳಿಪುರ,
ಜಂಗಲ್ ಲಾಡ್ಜಸ್ ಎಂಡಿ ಶ್ರೀ ವಿಜಯ್ ಶರ್ಮ, ಜಿಲ್ಲಾಧಿಕಾರಿ ಶ್ರೀ ಕೆ.ಬಿ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಶಿ ರಮೇಶ್, ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಾದ ಶ್ರೀ ರಾಜಪ್ಪ, ಶ್ರೀ ರವಿ, ಮತ್ತಿತರರು ಉಪಸ್ಥಿತರಿದ್ದರು.


ಅಂಬು ತೀರ್ಥದಿಂದ ಹುಟ್ಟಿ ಶರಾವತಿ ಸೇರುವ ಈ ಒಂದು ನದಿಯೂ ಲಿಂಗನಮಕ್ಕಿ ಸೇರುವ ಜಲಾಶಯದ ನೀರು 960 ಅಡಿ ಧುಮ್ಮುಕ್ಕಿ ಹರಿಯುವ ಈ ಒಂದು ಜೋಗದ ಜಲಪಾತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಈ ಜಲಪಾತವನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಹತ್ತಿರಕ್ಕೆ ಬಂದು ನೋಡುವ ರೀತಿಯಲ್ಲಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಸಂಸದರಾದ ಶ್ರೀ ಬಿವೈ ರಾಘವೇಂದ್ರ ಹೇಳಿದರು ಇಂದು ಜೋಗದ ಕೆಪಿಟಿಸಿಎಲ್ ಸಭಾಂಗಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಯ ರೂಪುರೇಷ ಮತ್ತು ನಿರೀಕ್ಷೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿ ಸಂಸದರು ಈ ಒಂದು ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಶೇಷ ಕಾಳಜಿ ವಹಿಸಿ ಸಚಿವ ಸಂಪುಟ ಸಭೆಯಲ್ಲಿ 120 ಕೋಟಿ ರು ಅನುದಾನವನ್ನು ನೀಡುವ ಒಪ್ಪಿಗೆಯನ್ನು ಸೂಚಿಸಲಾಗಿದೆ,ಪ್ರವಾಸೋದ್ಯಮ ಸಚಿವರಾದ ಶ್ರೀ ಸಿಟಿ ರವಿ ಅವರು ಮತ್ತು ಶಾಸಕರಾದ ಶ್ರೀ ಹಾಲಪ್ಪನವರು ವಿಶೇಷ ಆಸಕ್ತಿ ವಹಿಸಿದ್ದರು ಈ ಹಿಂದೆ ಜೋಗ ಅಭಿವೃದ್ಧಿ ಬಗ್ಗೆ ಬೆಂಗಳೂರಿನಲ್ಲಿ ಎರಡು ಬಾರಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು ಕೇಂದ್ರದಿಂದ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಅನುದಾನವನ್ನು ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗಿದೆ ▪ ವರ್ಷಪೂರ್ತಿ ಜಲಾಶಯ ವೀಕ್ಷಣೆ ▪ದೀಪಾಲಂಕಾರ ▪ಜಿಪ್ ಲೈನ್ ◼ ಕೇಬಲ್ ಕಾರು▪ವಾಚ್ ಟವರ್ ▪ಕಾರಂಜಿ ▪ಜಲಸಾಹಸ ಕ್ರೀಡೆ ▪ದೋಣಿವಿಹಾರ▪ ಹೋಟೆಲ್ ▪ವಸತಿಗಹಗಳು ▪ಮಕ್ಕಳ ಪಾರ್ಕ್ ಪಾರ್ಕಿಂಗ್, ಇವುಗಳ ಒಳಗೊಂಡಂತೆ ಬೆಂಗಳೂರಿನ ವಿಐ ಸಂಸ್ಥೆ ನೀಲಿ ನಕ್ಷೆಯನ್ನು ತಯಾರಿಸಿದೆ ಇದರೊಂದಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು ಈ ಸಂದರ್ಭದಲ್ಲಿ ಕರ್ನಾಟಕ ಸಾಹಸೋದ್ಯಮ ಅಭಿವೃದ್ಧಿ ಕಾರ್ಯಪಡೆ ಅಧ್ಯಕ್ಷ ಲಕ್ಷ್ಮೀನಾರಾಯಣ್, ಮಲೆನಾಡು ಪ್ರದೇಶ ಅಭಿವೃದ್ಧಿ ಅಧ್ಯಕ್ಷ ಶ್ರೀ ಎಸ್ ಗುರುಮೂರ್ತಿ,ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿಡಿ ಮೇಘರಾಜ್,ಜಿಲ್ಲಾ ಪಂಚಾಯತ್ ಸದಸ್ಯ ರಾಜಶೇಖರ್ ಗಾಳಿಪುರ, ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪೊನ್ನರಾಜ್, ಪ್ರವಾಸೋದ್ಯಮ ನಿಗಮ ವ್ಯವಸ್ಥಾಪಕ ನಿರ್ದೇಶಕ ಪುಷ್ಪರಾಜ್ ಸೇರಿದಂತೆ ಇನ್ನಿತರು ಹಾಜರಿದ್ದರು.

By K S Goutham, Sagara
