ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ವಹಿಸದ ಬಳಿಕ ಇದು ಮೊದಲ ಚುನಾವಣೆಯಾಗಿದ್ದು ಈ ನಿಟ್ಟಿನಲ್ಲಿ ಶಿರಾ ಅಥವಾ ಆರ್ಆರ್ ನಗರ ಕ್ಷೇತ್ರಗಳ ಪೈಕಿ ಕನಿಷ್ಠ ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸುವ ಅನಿವಾರ್ಯತೆ ಇದೆ. ಇದರಿಂದ ಚುನಾವಣಾ ಕಾರ್ಯಗಳಿಗೆ ಈಗಲೇ ಚಾಲನೆ ನೀಡಲಾಗಿದೆ.
ಬಿಜೆಪಿಯಲ್ಲಿರುವ ಆಂತರಿಕ ಭಿನ್ನಮತದ ಲಾಭ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದ್ದು ಇನ್ನು ಒಂದೆರಡು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಫೈನಲ್ ಮಾಡುವ ಸಾಧ್ಯತೆ ಇದೆ.
ಸದ್ಯ ರಕ್ಷಾ ರಾಮಯ್ಯ, ಮಾಗಡಿ ಬಾಲಕೃಷ್ಣ ಸೇರಿದಂತೆ ಮೂವರ ಹೆಸರುಗಳು ಕೇಳಿ ಬರುತ್ತಿದೆ.ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರ್ಲಾನ್ನಲ್ಲಿದ್ದಾರೆ.
ಈ ಉದ್ದೇಶಕ್ಕಾಗಿ ಅವರು ಹಿರಿಯ ಕಾಂಗ್ರೆಸ್ ಮುಖಂಡರನ್ನು ಭೇಟಿಯಾದರು.
ಡಿ ಕೆ ಸುರೇಶ್ ಅವರು ಆರ್ ಆರ್ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ತೆಗೆದುಕೊಂಡು ಅಭ್ಯರ್ಥಿಯನ್ನು ಲೆಕ್ಕಿಸದೆ ನಿಸ್ವಾರ್ಥವಾಗಿ ಕೆಲಸ ಮಾಡಲು ಹೇಳಿದರು
