ಜಮ್ಮು ಮತ್ತು ಕಾಶ್ಮೀರದ ಪಂಪೋರ್ ಬೈಪಾಸ್‌ನಲ್ಲಿ ಸಿಆರ್‌ಪಿಎಫ್‌ನ ರಸ್ತೆ ತೆರೆಯುವ ಪಕ್ಷದ (ಆರ್‌ಒಪಿ) ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಐವರು ಸಿಆರ್‌ಪಿಎಫ್ ಜವಾನರು ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
“ನಮ್ಮ ಸಿಬ್ಬಂದಿಗೆ ಗುಂಡು ಹಾರಿಸಿದ ಇಬ್ಬರು ಭಯೋತ್ಪಾದಕರನ್ನು ಗುರುತಿಸಲಾಗಿದೆ. ಓರ್ವ ಭಯೋತ್ಪಾದಕ ಲಷ್ಕರ್-ಎ-ತೈಬಾ (ಎಲ್‌ಇಟಿ) ಯಾಗಿದ್ದು, ಈ ಹಿಂದೆ ಎರಡು ಬಾರಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದರೆ, ಇನ್ನೊಬ್ಬ ಸ್ಥಳೀಯ ಭಯೋತ್ಪಾದಕ” ಎಂದು ಜಮ್ಮು ಮತ್ತು ಕಾಶ್ಮೀರ ಐಜಿ ವಿಜಯ್ ಕುಮಾರ್ ಹೇಳಿದರು.
