ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಸಮಸ್ತ ಕನ್ನಡಿಗರಿಗೆ ೬೫ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಕೋರಿದರು. ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ, ಪರಂಪರೆಗಳು ಸದಾ ಬೆಳಗಲಿ, ತಾಯಿ ಭುವನೇಶ್ವರಿಯ ಅನುಗ್ರಹದಿಂದ ಸ್ವಚ್ಛ, ಅರೋಗ್ಯಪೂರ್ಣ ಹಾಗೂ ಸಮೃದ್ಧ ಕನ್ನಡ ನಾಡು ನಿರ್ಮಾಣವಾಗಲಿ.

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 65ನೇ #ಕನ್ನಡರಾಜ್ಯೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ
ಶ್ರೀ ಬಿ. ಎಸ್. ಯಡಿಯೂರಪ್ಪ ರವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್,ಶಾಸಕ ರಿಝ್ವಾನ್ ಅರ್ಷದ್ ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ರವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸ್ಪೆಷಲ್ ಇನಿಷಿಯೇಟಿವ್ಸ್ ರೈಡರ್ಸ್ ಸಂಸ್ಥೆ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ರವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಚಾಲನೆ ನೀಡಿದರು. ಶಾಸಕ ರವಿ ಸುಬ್ರಹ್ಮಣ್ಯ, ಸಂಸ್ಥೆಯ ಅಧ್ಯಕ್ಷ ಡಿ.ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ವರದಿ: ಸಿಸಿಲ್ ಸೋಮನ್
