ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್.ಎಸ್.ಎಸ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಏಕಲವ್ಯ ಪ್ರಶಸ್ತಿ ಸೇರಿದಂತೆ ಎಲ್ಲಾ ಪ್ರಶಸ್ತಿ ಪುರಸ್ಕೃತ ಕ್ರೀಡಾ ಸಾಧಕರಿಗೆ ಹಾರ್ದಿಕ ಅಭಿನಂದನೆಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಸಿ ಟಿ ರವಿ, ಶಾಸಕ ರಿಝ್ವಾನ್ ಅರ್ಷದ್ಯು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕಲ್ಪನಾ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
