MSIL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಸಾಗರದ ನೂತನ ಖಾಸಗಿಬಸ್ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಸಾಗರದ ನೂತನ ಖಾಸಗಿಬಸ್ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ಶೀಘ್ರವಾಗಿ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು, ಸಣ್ಣ ಪುಟ್ಟ ಕೆಲಸಗಳು ಬಾಕಿಯಿದ್ದು ದೀಪಾವಳಿಯ ನಂತರ ಉದ್ಘಾಟನೆ ಮಾಡುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ
