ಶಿವಮೊಗ್ಗ: ಹಂದಿ ಬೇಟೆಗೆ ಸಂಗ್ರಹಿಸಿದ ಬಾಂಬ್ ಸ್ಫೋಟ 9 ಮಂದಿ ತೀವ್ರವಾಗಿ ಗಾಯ, ಓರ್ವನ ಸ್ಥಿತಿ ಗಂಭೀರ. ನಗರದ ಕುಂಚೇನಹಳ್ಳಿ ಸಮೀಪದಲ್ಲಿ ಕಾಡುಹಂದಿ ಬೇಟೆಯಾಡಲು ಬಳಸುವಂತಹ ನಾಡ ಬಾಂಬ್ ಸ್ಫೋಟದಿಂದ ಗಾಯಗೊಂಡಿರುವ ವ್ಯಕ್ತಿಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಡ ಬಾಂಬ್ಗಳನ್ನು ಬಿಸಿಲಿನಲ್ಲಿ ಒಣಗಿಸಲು ಹಾಕಿದ ವೇಳೆ ಆಕಸ್ಮಿಕವಾಗಿ ಸ್ಪೋಟಗೊಂಡಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವರದಿ: ಹರ್ಷ ಸಾಗರ
