ಸಾಗರ: ಶಾಸಕರಾದ ಹೆಚ್.ಹಾಲಪ್ಪ ನವರು ತಾಲ್ಲೂಕು ಹಂತದ ಅಧಿಕಾರಿಗಳೊಂದಿಗೆ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಸಭೆನೆಡೆಸಿದರು

MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ತಾಲ್ಲೂಕು ಹಂತದ ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಚಳಿಗಾಲ ಪ್ರಾರಂಭವಾಗಿರುವುದರಿಂದ ಕೊರೋನ ಹೆಚ್ಚಾಗುವ ಸಂಭವವಿದೆ ಈ ನಿಟ್ಟಿನಲ್ಲಿ ಕೈಗೊಳ್ಳ ಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚಿಸಿ, ಆಸ್ಪತ್ರೆಯಲ್ಲಿ ಸಿಬ್ಬಂದಿಕೊರತೆ, ಆಕ್ಸಿಜನ್ ಸಿಲೆಂಡರ್ ಕೊರತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಭರವಸೆ ನೀಡಿದರು.

ನಂತರ ಮಂಗನಕಾಯಿಲೆ ನಿರ್ಮೂಲನೆಗೆ ಕೈಗೊಳ್ಳಬೇಕಾದ ಕ್ರಮಗಳು, ವ್ಯಾಕ್ಸಿನೇಷನ್ ಮಾಡುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಧಿಕಾರಿಗಳು, ತಹಶೀಲ್ದಾರರು, ಡಿವೈಎಸ್ಪಿ ವಿನಾಯಕ ಯವರು, ನಗರಸಭೆ ಆಯುಕ್ತರು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ತಾಲ್ಲೂಕು ಅರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ
