ಸಾಗರ: ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆಗಳ ಬಗ್ಗೆ, ಸಾಗರ-ಹೊಸನಗರ ತಾ. ಖಾಲಿ ಇರುವ ಕಂದಾಯ ಇಲಾಖೆ ಅಧಿಕಾರಿಗಳ ಹುದ್ದೆ ಭರ್ತಿ ಮಾಡುವ ಬಗ್ಗೆ ಚರ್ಚಿಸಿದರು.
ನಂತರ ಸ್ಥಳದಲ್ಲಿ ಉಪಸ್ಥಿತರಿದ್ದ ಎಸ್.ಪಿ ಯವರೊಂದಿಗೆ ಚರ್ಚಿಸಿ, ಇತ್ತೀಚಿನ ದಿನಗಳಲ್ಲಿ ಕೊಲೆ ಹಾಗೂ ದರೋಡೆ ಪ್ರಕರಣಗಳು ಹೆಚ್ಚುತ್ತಿವೇ, ಮಲೆನಾಡು ಪ್ರದೇಶಗಳಲ್ಲಿ ಒಂಟಿ ಮನೆಗಳಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವರದಿ: ಗೌತಮ್ ಕೆ.ಎಸ್
