ಬೆಂಗಳೂರು: ಬಸವಕಲ್ಯಾಣಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರು ಶ್ರೀ ಬಿ.ವೈ. ವಿಜಯೇಂದ್ರ ಅವರ ಭೇಟಿ ನೀಡಿದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಅತ್ಯಂತ ಪ್ರೀತಿ, ಅಭಿಮಾನಿಗಳಿಂದ ಬರಮಾಡಿಕೊಂಡರು.
ಬಸವಾದಿ ಶರಣರ ಕುರುಹಾದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ರವರ ಸರ್ಕಾರ ಅಗತ್ಯ ಅನುದಾನ ಒದಗಿಸಿದ್ದು, ಕಟ್ಟಡ ಕಾಮಗಾರಿಗೆ ಶೀಘ್ರ ಆರಂಭವಾಗಲಿದೆ. ಇಂದು ಬಸವಕಲ್ಯಾಣದ ಅನುಭವ ಮಂಟಪದಲ್ಲಿ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶರಣರ ಆಶೀರ್ವಾದ ಪಡೆದುಕೊಳ್ಳಲಾಯಿತು.

ಬಸವಕಲ್ಯಾಣ ಪಕ್ಷದ ಕಾರ್ಯಕರ್ತರ, ಅಭಿಮಾನಿಗಳ ಈ ಪ್ರೀತಿ ಅಭಿಮಾನಗಳಿಗೆ ನಾನು ಚಿರಋಣಿ. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ, ನಿಮ್ಮಲ್ಲಿ ಒಬ್ಬನಾಗಿ, ಈ ಸಂಭ್ರಮದ ಸ್ವಾಗತಕ್ಕೆ, ನೀವು ತೋರಿದ ಗೌರವಾದರಗಳಿಗೆ ಅತ್ಯಂತ ವಿನೀತ ಭಾವದಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಬಸವಕಲ್ಯಾಣದಲ್ಲಿ ಮರಾಠ ಸಮಾಜದ ಬಂಧುಗಳ ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಶ್ರೀ ಪ್ರಭು ಚವ್ಹಾಣ್, ಸಂಸದ ಶ್ರೀ ಭಗವಂತ ಖೂಬಾ, ಸಮಾಜದ ಮುಖಂಡರು ಮತ್ತು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ: ಸಿಸಿಲ್ ಸೋಮನ್
