ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಆಚರಿಸಲು ಕರೆ ನೀಡಿವೆ – ವಾಟಾಳ್ ನಾಗರಾಜ್.
ರಾಜ್ಯದಲ್ಲಿ ಹಲವು ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಆಚರಿಸಲು ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಹಲವು ಸಂಘಟನೆಗಳು ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ರಾಜ್ಯ ಸರ್ಕಾರ ಕನ್ನಡ ವಿರೋಧಿ ಧೋರಣೆ ತಳೆದಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಕಳೆದ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಬಂದ್ ಕರೆ ಕೈಬಿಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಮನವಿ ಮಾಡಿದ್ದಾರೆ ಭಾಷೆಯ ಮೇಲೆ ನಿಗಮ ಮಾಡಲಿ ಸಂಸ್ಕೃತಿ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ವರದಿ: ಹರ್ಷ ಸಾಗರ
