ಸಾಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಲ್ಲಿ” ವ್ಯಾಪಕ ಅವ್ಯವಹಾರ ನೆಡೆದಿದ್ದು.
MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನೆಡೆಸಿ ಹಗರಣದ ಬಗ್ಗೆ ಮಾಹಿತಿ ಪಡೆದು, ಮೆಸ್ಕಾಂ MD ಯವರಿಗೆ ಕರೆಮಾಡಿ, BPL ಹಾಗೂ ಅದಕ್ಕಿಂತ ಬಡತನದಲ್ಲಿರುವ ಕುಟುಂಬಕ್ಕೆ ನೀಡುವ ಅಮೂಲ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಿಲ್ಲ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ನೀಡಿರುವ ಪಟ್ಟಿ ತಾಳೆ ಆಗುತ್ತಿಲ್ಲ, ಫಲಾನುಭವಿಗಳಲ್ಲದ ನಕಲಿ ಹೆಸರುಗಳನ್ನು ಸೇರ್ಪಡೆ ಮಾಡಿ ಬಿಲ್ ಪಡೆಯಲು ಯತ್ನಿಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ವರದಿ: ಗೌತಮ್ ಕೆ.ಎಸ್
