ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಶಾಲೆಗಳನ್ನು ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ಸಲಹೆ ಮೇರೆಗೆ ಡಿಸೆಂಬರ್ ನಂತರ ಪ್ರಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಇಂದು ಸಭೆ ನಡೆಸಲಾಯಿತು. ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಡಿಸೆಂಬರ್ ಅಂತ್ಯದವರೆಗೆ ಪರಿಸ್ಥಿತಿ ಅವಲೋಕಿಸಿ, ನಂತರ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಆರೋಗ್ಯ ಸಚಿವರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
