ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು’ಕೌಶಲ್ಯ ಕರ್ನಾಟಕ’ ಮಾಸಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹೊರತರುವ ‘ಕೌಶಲ್ಯ ಕರ್ನಾಟಕ’ ಮಾಸಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ , ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ
ಎಸ್ ಸುರೇಶ್ ಕುಮಾರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಕೌಶಲ್ಯ ಅಭಿವೃದ್ಧಿ , ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ ಎಸ್.ಸೆಲ್ವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
