ಬೆಂಗಳೂರು: ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಇಂದು ಲೋಕಾರ್ಪಣೆ ಮಾಡಿದರು.
ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಇಂದು ಲೋಕಾರ್ಪಣೆ ಮಾಡಿದ್ದು, ಇದು ’ಒಂದು ರಾಷ್ಟ್ರ ಒಂದು ಗ್ರಿಡ್’ ಪರಿಕಲ್ಪನೆಯ ಮಹತ್ವಪೂರ್ಣ ಮೈಲಿಗಲ್ಲಾಗಿದೆ. ಇದರಿಂದ ಉಡುಪಿ,ದಕ್ಷಿಣಕನ್ನಡ ಜಿಲ್ಲೆಗಳ ಮನೆಗಳಿಗೆ, ವಾಣಿಜ್ಯೋದ್ಯಮಗಳಿಗೆ ಮತ್ತು ಕೈಗಾರಿಕೆಗಳಿಗೆ ಪ್ರಯೋಜನವಾಗಲಿದೆ.
ಈ ಯೋಜನೆಯಿಂದ ರಾಜ್ಯದಲ್ಲಿ ಅನಿಲ ಆಧಾರಿತ ಆರ್ಥಿಕತೆ ವೃದ್ಧಿಯ ಜೊತೆಗೆ ಅನಿಲ ಆಧಾರಿತ ಕೈಗಾರಿಕೆಗಳ ಮೂಲಕ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿದೆ. ರಾಜ್ಯದ ಸಮಸ್ತ ಜನತೆ ಪರವಾಗಿ ಪ್ರಧಾನಮಂತ್ರಿಗಳಿಗೆ ಮತ್ತು ಪೆಟ್ರೋಲಿಯಂ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ರವರಿಗೆ ಧನ್ಯವಾದಗಳು.

ವರದಿ: ಹರ್ಷ ಸಾಗರ

