ನವ ದೆಹಲಿ: ದೇಶಾದ್ಯಂತ ಜಿಲ್ಲಾ ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ, ಒಟ್ಟು 551 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಪಿಎಂ ಕೇರ್ಸ್ ಮೂಲಕ ಸ್ಥಾಪಿಸಲಾಗುತ್ತಿದೆ.

ದೇಶಾದ್ಯಂತ ಜಿಲ್ಲಾ ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ, ಒಟ್ಟು 551 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಪಿಎಂ ಕೇರ್ಸ್ ಮೂಲಕ ಸ್ಥಾಪಿಸಲಾಗುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು, ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ಮೂಲಕ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತಾಗಿ ಆಕ್ಸಿಜನ್ ಘಟಕಗಳ ಸ್ಥಾಪನೆಯ ರಾಜ್ಯದ ಕೋರಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್

