ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋವಿಡ್ ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋವಿಡ್ ಪರಿಸ್ಥಿತಿ ಕುರಿತು ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡರ ಜತೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೇಂದ್ರದ ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ಮಾರ್ಗರೇಟ್ ಆಳ್ವ, ರೆಹಮಾನ್ ಖಾನ್, ಜಯರಾಮ್ ರಮೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಧೃವನಾರಾಯಣ್, ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್. ಶಂಕರ್. ಸಹ ಅಧ್ಯಕ್ಷ ವಿ.ಆರ್. ಸುದರ್ಶನ್, ರಾಜ್ಯಸಭೆ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಎಲ್. ಹನುಮಂತಯ್ಯ, ನಾಸೀರ್ ಹುಸೇನ್, ರಾಜ್ಯದ ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಟಿ.ಬಿ. ಜಯಚಂದ್ರ, ಎಂ.ಬಿ. ಪಾಟೀಲ್, ಮೋಟಮ್ಮ, ರಾಣಿ ಸತೀಶ್, ಜಯಮಾಲ ಮತ್ತಿತರರು ಪಾಲ್ಗೊಂಡರು.

ವರದಿ: ಸಿಸಿಲ್ ಸೋಮನ್

